July 24, 2026
Friday, July 24, 2026
spot_img

ಐಪಿಎಲ್​​ ಸೇರಿ ಭಾರತೀಯ ಕ್ರಿಕೆಟ್​​ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್‌ರೌಂಡರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ವಿಜಯ್ ಶಂಕರ್ ಐಪಿಎಲ್ ಹಾಗೂ ದೇಶಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ಎಲ್ಲರಿಗೂ ನನ್ನ ಧನ್ಯವಾದಗಳು

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿರುವ ವಿಜಯ್ ಶಂಕರ್ , ‘ಕ್ರಿಕೆಟ್ ನನ್ನ ಜೀವನ. 10 ನೇ ವಯಸ್ಸಿನಲ್ಲಿ ಕ್ರಿಕೆಟ್ ಆಡಲು ಪ್ರಾರಂಭಿಸಿ, 25 ವರ್ಷ ತುಂಬುವ ಹೊತ್ತಿಗೆ ಎಲ್ಲಾ ಹಂತದ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ನನ್ನ ದೇಶಕ್ಕಾಗಿ ಆಡುವುದು ಯಾವಾಗಲೂ ನನ್ನ ಹೆಮ್ಮೆಯ ಮತ್ತು ಸಂತೋಷದ ಕ್ಷಣವಾಗಿತ್ತು. ಕ್ರೀಡೆಯಲ್ಲಿ ಹೊಸ ಅವಕಾಶಗಳನ್ನು ಪಡೆಯಲು ದೇಶೀಯ ಮತ್ತು ಐಪಿಎಲ್ ಕ್ರಿಕೆಟ್ ಎರಡರಿಂದಲೂ ನಿವೃತ್ತಿ ಹೊಂದಲು ನಾನು ನಿರ್ಧರಿಸಿದ್ದೇನೆ. ನಿಮ್ಮೆಲ್ಲರಿಂದ ನನಗೆ ದೊರೆತ ಪ್ರೀತಿಗೆ ನಾನು ಯಾವಾಗಲೂ ಕೃತಜ್ಞನಾಗಿರುತ್ತೇನೆ. ಬಿಸಿಸಿಐ, ನನ್ನ ಎಲ್ಲಾ ತರಬೇತುದಾರರು, ಸಹಾಯಕ ಸಿಬ್ಬಂದಿ, ಫಿಸಿಯೋಗಳು ಮತ್ತು ತರಬೇತುದಾರರು ಹಾಗೂ ನನ್ನ ಕ್ರಿಕೆಟ್ ಪ್ರಯಾಣಕ್ಕೆ ಕೊಡುಗೆ ನೀಡಿದ ಎಲ್ಲರಿಗೂ ಧನ್ಯವಾದ ಹೇಳಲು ನಾನು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ ಎಂದು ಬರೆದಿದ್ದಾರೆ.

ಶಂಕರ್ ವೃತ್ತಿಜೀವನ

35 ವರ್ಷದ ವಿಜಯ್ ಶಂಕರ್ ಭಾರತ ತಂಡಕ್ಕಾಗಿ 12 ಏಕದಿನ ಮತ್ತು 9 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಏಕದಿನ ಪಂದ್ಯಗಳಲ್ಲಿ ವಿಜಯ್ 223 ರನ್ ಗಳಿಸಿ 4 ವಿಕೆಟ್ ಪಡೆದಿದ್ದಾರೆ. ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 43 ರನ್ ಮತ್ತು 5 ವಿಕೆಟ್ ಕಬಳಿಸಿದ್ದಾರೆ.

ಐಪಿಎಲ್ ಕೆರಿಯರ್

ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಸೇರಿದಂತೆ ನಾಲ್ಕು ತಂಡಗಳ ಪರ ಆಡಿದ್ದಾರೆ. ಶಂಕರ್ 78 ಐಪಿಎಲ್ ಪಂದ್ಯಗಳಲ್ಲಿ ಆಡಿದ್ದು, 1,233 ರನ್ ಗಳಿಸಿದ್ದಾರೆ. ಅಲ್ಲದೆ, ಒಂಬತ್ತು ವಿಕೆಟ್‌ಗಳನ್ನು ಪಡೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !