ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಟಗಾರ ಹೆನ್ರಿಕ್ ಕ್ಲಾಸೆನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಕೆಟ್​ ಲೋಕಕ್ಕೆ ಒಂದೇ ದಿನ ಎರಡೆರಡು ಆಘಾತ ಎದುರಾಗಿದೆ. ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ ಎಲ್ಲರಿಗೂ ಶಾಕ್ ನೀಡಿದ್ದರು. ಇದೀಗ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಹೆನ್ರಿಕ್ ಕ್ಲಾಸೆನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದ ಕ್ಲಾಸೆನ್ ಕೇವಲ 33ನೇ ವಯಸ್ಸಿಗೆ ಈ ನಿರ್ಧಾರ ತೆಗೆದುಕೊಂಡಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಕ್ಲಾಸೆನ್​ಗೆ ಟಿ20 ಕ್ರಿಕೆಟ್​ನಲ್ಲಿ ಭಾರಿ ಬೇಡಿಕೆ ಇದೆ. ಹೀಗಾಗಿಯೇ ಅವರು ವಿಶ್ವದ ಇತರ ಟಿ20 ಲೀಗ್​ಗಳಲ್ಲೂ ಆಡುತ್ತಿದ್ದಾರೆ. ಹೀಗಿರುವಾಗ ಇದ್ದಕ್ಕಿದ್ದಂತೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವುದು ಅಚ್ಚರಿ ಮೂಡಿಸಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!