ಉಪಚುನಾವಣೆ ಪ್ರಚಾರಕ್ಕೆ ಬಿಜೆಪಿಯಿಂದ ಸ್ಟಾರ್ ರಿಲೀಸ್: ಯತ್ನಾಳ್, ಪ್ರತಾಪ್ ಸಿಂಹ, ಸುಮಲತಾ ಹೆಸರಿಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟವಾಗಿದೆ.

ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ 40 ಬಿಜೆಪಿ ನಾಯಕರಿಗೆ ಸ್ಥಾನ ನೀಡಲಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿಗೆ ಕೊಕ್ ನೀಡಲಾಗಿದೆ. ಅರವಿಂದ ಲಿಂಬಾವಳಿ, ಸಂಸದ ಜಿ.ಎಂ.ಸಿದ್ದೇಶ್ವರ ಹೆಸರಿಗೂ ಹೈಕಮಾಂಡ್ ಕೊಕ್ ಕೊಟ್ಟಿದೆ.

ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿರೋ ಪ್ರಮುಖರು ಯಾರು?
ಬಿ.ಎಸ್.ಯಡಿಯೂರಪ್ಪ, ರಾಧ ಮೋಹನ್ ದಾಸ್, ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಛಲವಾಧಿ ನಾರಾಯಣಸ್ವಾಮಿ, ಡಿ.ವಿ.ಸದಾನಂದಗೌಡ, ಬಸವರಾಜ್ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಸಿ.ಎನ್.ಮಂಜುನಾಥ್, ಜಗ್ಗೇಶ್‌ಗೆ ಪಟ್ಟಿಯಲ್ಲಿದ್ದಾರೆ.

ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದೆ ಸುಮಲತಾ ಹೆಸರುಗಳನ್ನೂ ಹೈಕಮಾಂಡ್ ಕೈಬಿಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!