ಅಳಿವಿನಂಚಿನ ಜೀವಿ ನಕ್ಷತ್ರ ಆಮೆ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳು ಸರೆ

ಹೊಸದಿಗಂತ ವರದಿ, ಮಡಿಕೇರಿ
ಅಳಿವಿನ ಅಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.
ಜಿಯಾವುಲ್ಲಾ ಖಾನ್ ಮತ್ತು ಸನಾವುಲ್ಲಾ ಖಾನ್ ಎಂಬವರೇ ಬಂಧಿತ ಆರೋಪಿಗಳಉ. ಇವರಿಂದ ಒಂದು ಜೀವಂತ ನಕ್ಷತ್ರ ಆಮೆಯನ್ನು ವಶಕ್ಕೆ ಪಡೆಯಲಾಗಿದೆ.
ಮಡಿಕೇರಿ-ವೀರಾಜಪೇಟೆ ರಾಜ್ಯ ಹೆದ್ದಾರಿಯ ಶಕ್ತಿನಗರದ ಮೇಕೇರಿ ಬಸ್ಸು ತಂಗುದಾಣದ ಬಳಿ ಇಬ್ಬರು ವ್ಯಕ್ತಿಗಳು ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಠಾಣೆಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು. ಸವಿ, ಹೆಡ್‌ ಕಾನ್ಸ್‌ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್‌, ಮೋಹನ ಮತ್ತು ಕಾನ್ಸ್‌ಟೇಬಲ್‌ಗಳಾದ ಸ್ವಾಮಿ ಮತ್ತು ಮಂಜುನಾಥ ಅವರುಗಳು ಕಾರ್ಯಾಚರಣೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!