Wednesday, June 29, 2022

Latest Posts

ಇಂದಿನಿಂದ ರಾಜ್ಯಾದ್ಯಂತ ಉನ್ನತ ಶಿಕ್ಷಣ ಕಾಲೇಜು ಆರಂಭ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಕೆಯಾಗಿರುವ ಹಿನ್ನೆಲೆ ಇಂದಿನಿಂದ ಉನ್ನತ ಶಿಕ್ಷಣ ಕಾಲೇಜುಗಳ ಆರಂಭವಾಗಿದೆ.

ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್​ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗಿದ್ದು, ಆದರೆ ಕಾಲೇಜಿಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕೆಂದಿಲ್ಲ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.

  • ಕಾಲೇಜುಗಳು ಕೋವಿಡ್‌ ಮಾರ್ಗಸೂಚಿ ಪಾಲಿಸುವುದು ಕಡ್ಡಾಯವಾಗಿದೆ.
  • ಕಾಲೇಜಿಗೆ ಹಾಜರಾಗುವ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದಿರುವುದೂ ಕಡ್ಡಾಯ ಮಾಡಲಾಗಿದೆ.
  •  ವಿದ್ಯಾರ್ಥಿಗಳ ಲಸಿಕಾ ಪ್ರಮಾಣಪತ್ರ ಪರಿಶೀಲಿಸಿ ತರಗತಿಗೆ ಪ್ರವೇಶ ನೀಡಲಾಗುತ್ತದೆ.
  • ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿರಬೇಕು.
  • ನಿತ್ಯವೂ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಬೇಕು.

ಈಗಾಗಲೇ ಶೇ. 74 ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss