ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಕುಶಾಲನಗರ:
ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯದ ಕ್ರೀಡಾ ಹಾಸ್ಟೆಲ್ ಮತ್ತು ಕ್ರೀಡಾ ಶಾಲೆಗಳಿಗೆ ವಿದ್ಯಾರ್ಥಿಗಳ ಅಂತಿಮ ಅಯ್ಕೆ ಪ್ರಕ್ರಿಯೆ ಕೂಡಿಗೆ ಕ್ರೀಡಾ ಪ್ರೌಢಶಾಲಾ ಮೈದಾನದಲ್ಲಿ ಅರಂಭಗೊಂಡಿದೆ.
ರಾಜ್ಯದ 32 ಕ್ರೀಡಾ ಹಾಸ್ಟೆಲ್ ಗಳಿಗೆ 7ನೇ ತರಗತಿಯಲ್ಲಿ ಪಾಸ್ ಆಗಿ 8ನೇ ತರಗತಿಗೆ ಮತ್ತು ಪದವಿ ಪೂರ್ವ ತರಗತಿಯವರೆಗೆ ಸೇರಲು ಆಯಾ ವಿದ್ಯಾರ್ಥಿಗಳ ಕಿರಿಯ ಬಾಲಕ, ಬಾಲಕಿಯರ ಮತ್ತು ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಮೂರು ಹಂತದಲ್ಲಿ ನಡೆಯಲಿದೆ.
ಮೊದಲು ಜು.25 ರಿಂದ ಆಗಸ್ಟ್ 1 ರ ವರೆಗೆ ಕೋವಿಡ್ ನಿಯಮನುಸಾರವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳ ಅಂತಿಮ ಆಯ್ಕೆ ಪ್ರಕ್ರಿಯೆಯಡಿ ಆಯಾ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕ್ರೀಡೆಯ ಬಗ್ಗೆ ತಪಾಸಣೆ ನಡೆಸಲಾಗುತ್ತದೆ ಎಂದು ರಾಜ್ಯ ಮಟ್ಟದ ಶಿಬಿರಾಧಿಕಾರಿ ಡಾ. ವಸಂತ್ ಕುಮಾರ್ ತಿಳಿಸಿದ್ದಾರೆ.
ಆಯಾ ಕ್ರೀಡೆಗೆ ಈಗಾಗಲೇ ಜಿಲ್ಲೆ ಮತ್ತು ವಿಭಾಗ ಮಟ್ಟದಲ್ಲಿ ಭಾಗವಹಿಸಿದ ನಂತರ ಅಂತಿಮ ಮಟ್ಟದ ಆಯ್ಕೆಗೆ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅಲ್ಲದೆ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವಿವಿಧ ಕ್ರೀಡೆಗೆ ಸಂಬಂಧಿಸಿದ 44 ಕ್ರೀಡಾ ತರಬೇತುದಾರರು ಭಾಗವಹಿಸಿದ್ದಾರೆ.
ರಾಜ್ಯ ಮಟ್ಟ ಅಂತಿಮ ಅಯ್ಕೆ ಪ್ರಕ್ರಿಯೆಯಲ್ಲಿ ವಾಲಿಬಾಲ್, ಅಥ್ಲೆಟಿಕ್ಸ್ ,ಬಾಸ್ಕೆಟ್ಬಾಲ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್ , ಜೂಡೋ, ಕುಸ್ತಿ ಸೇರಿದಂತೆ ಎಂಟು ಕ್ರೀಡೆಗಳಲ್ಲಿ ಆಯ್ಕೆ ನಡೆಯುತ್ತದೆ ಎಂದು ವಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ.