ಚಾರ್‌ ಧಾಮ್‌ ಯಾತ್ರೆ ಪ್ರಾರಂಭ: ಉತ್ತರಾಖಂಡ್‌ ಸರ್ಕಾರ ಹೊರಡಿಸಿದ ಮಾರ್ಗಸೂಚಿಯಲ್ಲೇನಿದೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮೇ.3 ರಿಂದ ಚಾರ್‌ ಧಾಮ್‌ ಯಾತ್ರೆಯು ಪ್ರವಾಸಿಗಳಿಗೆ ತೆರೆದುಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಉತ್ತರಾಖಂಡ್‌ ಸರ್ಕಾರವು ಯಾತ್ರಾರ್ಥಿಗಳಿಗೆ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತು ಅಲ್ಲಿನ ಮುಖ್ಯ ಕಾರ್ಯದರ್ಶಿಯವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆನಡೆಸಿದ್ದು ʼಯಾತ್ರೆಗೆಂದು ಬರುವವರೆಲ್ಲರೂ ಉತ್ತರಾಖಂಡ್‌ ರಾಜ್ಯದರ್ಕಾರದ ವೆಬ್‌ ಸೈಟ್‌ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳುವಂತೆʼ ಸೂಚಿಸಿದೆ. ಇನ್ನು ಕೋವಿಡ್‌ ಪರೀಕ್ಷೆ ಮತ್ತು ಲಸಿಕೆ ಪ್ರಮಾಣಪತ್ರಗಳ ಕುರಿತಾಗಿ ಯಾವುದೇ ವಿಶೇಷ ಉಲ್ಲೇಖಗಳನ್ನು ಮಾಡಲಾಗಿಲ್ಲ. ಇವತ್ತಿನ ವರೆಗೂ ಕೋವಿಡ್‌ ಪರೀಕ್ಷೆ ಮತ್ತು ಲಸಿಕೆ ಪ್ರಮಾಣಪತ್ರಗಳನ್ನು ಕಡ್ಢಾಯಗೊಳಿಸಲಾಗಿಲ್ಲ ಎಂದು ಸರ್ಕಾರಿ ಮೂಲಗಳು ಸ್ಪಷ್ಟಪಡಿಸಿವೆ.

ಆದರೆ ಉತ್ತರಾಖಂಡ್‌ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ ಸೈಟ್‌ ನಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದ್ದು ಅಲ್ಲಿನ ಪರಿಸ್ಥಿತಿಗಳು ಮತ್ತು ಪ್ರಸ್ತುತ ವಿದ್ಯಮಾನಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡಲು ಅನುಕೂಲವಾಗುವ ದೃಷ್ಟಿಯಿಂದ ಈ ನಿಯಮವನ್ನು ಜಾರಿ ಮಾಡಲಾಗಿದೆ ಎಂದು ಸುದ್ದಿಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!