ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ಶಾಲಾ ಮಕ್ಕಳ ಬಗ್ಗೆ ವಿಶೇಷ ಗಮನ ಹರಿಸಿದ್ದು, ಶಾಲಾ ಮಕ್ಕಳಿಗಾಗಿ ಮಕ್ಕಳ ಬಸ್ ಆರಂಭಿಸಲಾಗುತ್ತಿದೆ.
ಇದಕ್ಕಾಗಿ 100 ಕೋಟಿ ರೂ. ಅನುದಾನ ಮೀಸಲಿಡಲಾಗುತ್ತಿದೆ. ಮಕ್ಕಳ ಬಸ್ ಯೋಜನೆ ಶೀಘ್ರವೇ ಅನುಷ್ಠಾನಗೊಳ್ಳಲಿದ್ದು, ಇದರಿಂದ ಎರಡು ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆದುಕೊಳ್ಳಲಿದ್ದಾರೆ.
ರಾಜ್ಯ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.