ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತನ್ನ ಮೊದಲ ಗೆಲುವು ಸಾಧಿಸಿದ ಬಳಿಕ ವಿನೇಶ್ ಫೋಗಟ್ ಪ್ರತಿಕ್ರಿಯೆ ನೀಡಿದ್ದು, ʻಸತ್ಯಕ್ಕೆ ಜಯವಾಗಿದೆ’ ಎಂದು ಹೇಳಿದ್ದಾರೆ.
ಹರಿಯಾಣ ಚುನಾವಣೆಯ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದರು.
ಚೊಚ್ಚಲ ಗೆಲುವು ಕಂಡ ವಿನೇಶ್ ಮಾತನಾಡಿ, ನಾನು ಹೊಸ ಇನ್ನಿಂಗ್ಸ್ ಪ್ರಾರಂಭಿಸುತ್ತಿದ್ದೇನೆ. ನಾನು ನನ್ನ ಕ್ರೀಡಾ ಜೀವನದಲ್ಲಿ ಅನುಭವಿಸಿದ ನೋವನ್ನು ಬೇರೆ ಕ್ರೀಡಾಪಟುಗಳು ಅನುಭವಿಸುವುದು ಬೇಡ ಎಂದು ಬಯಸುತ್ತೇನೆ ಎಂದರು.
ನನ್ನ ರಾಜಕೀಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸಮಯ ಸರಿಯಿಲ್ಲದೇ ಇರುವಾಗ ಮಾತ್ರ ನಮ್ಮ ಜೊತೆ ಯಾರು ನಿಂತಿದ್ದಾರೆ ಎಂದು ಗೊತ್ತಾಗುತ್ತದೆ. ಬಿಜೆಪಿ ಪಕ್ಷವನ್ನು ಹೊರತುಪಡಿಸಿ ಇತರ ಎಲ್ಲಾ ಪಕ್ಷಗಳು ನನ್ನ ನೋವನ್ನು ಹಾಗೂ ನನ್ನ ಕಣ್ಣೀರನ್ನು ಅರ್ಥಮಾಡಿಕೊಂಡಿದ್ದವು ಎಂದರು.