Saturday, August 13, 2022

Latest Posts

ನಾಳೆಯಿಂದ ಎಸ್ಸೆಸ್ಸೆಲ್ಸಿ ಎಕ್ಸಾಂ ಆರಂಭ: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಜುಲೈ 19 ಮತ್ತು 22 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆ ಪರೀಕ್ಷಾ ಕೇಂದ್ರಕ್ಕೆ ತೆರಳಲು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್’ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಂಚಾರಕ್ಕೆ ಅವಕಾಶ ನೀಡಿದೆ.

ಈ ಕುರಿತಂತೆ ಕೆಎಸ್ಆರ್ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಸುತ್ತೋಲೆ ಹೊರಡಿಸಿದ್ದು, 2020-21ನೇ ಸಾಲಿನ ಕರ್ನಾಟಕದ ಎಸ್ಸೆಸ್ಸೆಲ್ಸಿ ಅಂತಿಮ ಪರೀಕ್ಷೆಗಳನ್ನು ಜುಲೈ 19 ಮತ್ತು22 ರಂದು ನಡೆಯಲಿದ್ದು, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಕೋರಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವರಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿಸಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪತ್ರಯಾಣಕ್ಕೆ ಅನುಮತಿಸಲ ನಿಗಮದ ಎಲ್ಲ ಚಾಲಕರು ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡಲು ಸೂಚಿಲಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss