spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

”ಭಾರತದಲ್ಲಿ ಸ್ಟಾರ್ಟ್‌ಅಪ್ ಸಂಸ್ಕೃತಿ ಕಂಡು ಖುಷಿಯಾಗುತ್ತಿದೆ, ಇವರ ಸಹಾಯಕ್ಕೆ ನಾವು ಸಿದ್ಧ”

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ಸ್ಟಾರ್ಟ್‌ಅಪ್ ಸಂಸ್ಕೃತಿ ಈಗಿನ್ನೂ ಹೆಚ್ಚಾಗುತ್ತಿದೆ. ಇದನ್ನು ನೋಡೋದಕ್ಕೆ ತುಂಬಾನೇ ಖುಷಿಯಾಗ್ತಿದೆ. ಭಾರತದಲ್ಲಿ ಸ್ಟಾರ್ಟ್‌ಅಪ್‌ಗಳನ್ನು ಸ್ಕೇಲ್‌ಅಪ್ ಮಾಡಲು ಎಐ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ರೂಪದಲ್ಲಿ ತಾಂತ್ರಿಕ ಬೆಂಬಲವನ್ನು ನೀಡಲು ಗೂಗಲ್ ಬಯಸುತ್ತದೆ ಎಂದು ಗೂಗಲ್ ಸಿಇಒ ಸುಂದರ್ ಪಿಚ್ಚೈ ಹೇಳಿದ್ದಾರೆ.

ಜಾಗತಿಕ ಮಟ್ಟದಲ್ಲಿ ಭಾರತ ತನ್ನನ್ನು ತಾನು ಸಾಬೀತುಪಡಿಸಿಕೊಳ್ಳುತ್ತಿದೆ. ಭಾರತದಲ್ಲಿ ಹಲವಾರು ಸ್ಟಾರ್ಟ್‌ಅಪ್ ಕಂಪನಿಗಳು ಹುಟ್ಟುತ್ತಲೇ ಇದೆ. ಇದಕ್ಕೆ ಬೆಂಬಲ ನೀಡಲು ಮತ್ತು ಎಐ ತಂತ್ರಜ್ಞಾನ ಒದಗಿಸಲು ನಾವು ಸಹಾಯ ಮಾಡುತ್ತೇವೆ. ಇದರಿಂದ ಅವರ ಕಾರ್ಯವೈಖರಿ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯರು ಒಂದು ವಸ್ತುವನ್ನು ನಿರ್ಮಿಸಿ, ಅದನ್ನು ಜಾಗತಿಕವಾಗಿ ತೆರೆದಿಡುವ ಬಗ್ಗೆ ಹೆಚ್ಚಿನ ಆಲೋಚನೆ ಮಾಡುತ್ತಿದ್ದಾರೆ. ಇದನ್ನು ನಾನು ಗಮನಿಸಿದ್ದೇನೆ. ಇದೇ ಕಾರಣಕ್ಕೆ ನಾವು ಕೂಡ ಗೂಗಲ್ ಪೇ ಆರಂಭಿಸಿದ್ದು. ಇನ್ನೂ ಹೆಚ್ಚಿನ ಮಾರುಕಟ್ಟೆಗಳಲ್ಲಿ ಇದರ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿದ್ದೇವೆ ಎಂದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss