ಹೊಸ ದಿಗಂತ ಡಿಜಿಟಲ್ ಡೆಸ್ಕ್
ಈಗಾಗಲೇ ಒಂದು ಬಾರಿ ಮುಂದೂಡಿಕೆ ಮಾಡಿದ್ದಂತ ರಾಜ್ಯ ಸಚಿವ ಸಂಪುಟ ಸಭೆ ಮತ್ತೆ ಮೇ.12ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಮೇ11ರಂದು 11 ಗಂಟೆಗೆ ವಿಧಾನಸೌಧದಲ್ಲಿ ನಿಗದಿಯಾಗಿದ್ದಂತ ಸಚಿವ ಸಂಪುಟ ಸಭೆಯನ್ನು ಮತ್ತೆ ಮೇ 12ರಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.
ಅಂದಹಾಗೇ ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಇಂದು ತೆರಳಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಕೇಂದ್ರದ ವರಿಷ್ಠರನ್ನು ಭೇಟಿ ಮಾಡಲಿರುವ ಅವರು, ಸಂಪುಟ ಸರ್ಕಸ್ ಗೆ ಗ್ರೀನ್ ಸಿಗ್ನಲ್ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ