ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಒಕ್ಕಲಿಗರು ಕಾಂಗ್ರೆಸ್ ಕೈ ಬಿಡೋದಿಲ್ಲ, ರೆಡ್ಡಿ ಸೇರಿದಂತೆ ಒಟ್ಟು ಎಂಟು ಮಂದಿ ಒಕ್ಕಲಿಗ ನಾಯಕರಿಗೆ ಟಿಕೆಟ್ ನೀಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿರುವ ನಾನು ಕೂಡ ಒಕ್ಕಲಿಗ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹೆಚ್.ಡಿ. ದೇವೇಗೌಡರು ತಮ್ಮ ಅಳಿಯನಿಗೆ ಬಿಜೆಪಿ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿರಬಹುದು, ಆದರೆ ಬೆಂಗಳೂರು ಗ್ರಾಮಾಂತರ ಸೇರಿದಂತೆ ನಾಲ್ಕೂ ಸ್ಥಾನಗಳಲ್ಲಿ ಜೆಡಿಎಸ್ ಸೋಲು ಅನುಭವಿಸುವುದು ಖಚಿತ, ಎಂದಿದ್ದಾರೆ.
ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ಸಚಿವರಾಗಲು ಬಯಸುತ್ತಾರಾ ಅಥವಾ ಇನ್ನೇನಾದರೂ ಆಗಲಿ, ಅವರಿಗೆ ನಾನು ಶುಭ ಹಾರೈಸುತ್ತೇನೆ ಎಂದು ಹೇಳಿದರು.