ನಾಳೆ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ, ರಾಜಧಾನಿಯಲ್ಲಿ ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೇ.10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆದಿದ್ದು, ಶಾಂತಿಯುತ ಮತದಾನ ನಡೆದಿದೆ.
ನಾಳೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಭಾರೀ ಮುನ್ನೆಚ್ಚರಿಕೆಯಿಂದ ರಾಜಧಾನಿ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದೆ.

ಮತಎಣಿಕೆ ವೇಲೆ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆ ಇದೆ, ಈ ರೀತಿ ಘಟನೆಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನಲ್ಲಿ ಮೇ.13 ರಂದು ಸಂಪೂರ್ಣ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆ ಗುಂಪುಗಳಲ್ಲಿ ಜನ ನಿಲ್ಲದಂತೆ ಸೂಚನೆ ನೀಡಲಾಗಿದೆ. ಯಾವುದೇ ರೀತಿ ಕಾರ್ಯಕ್ರಮಗಳಿಗೂ ನಿಷೇಧಾಜ್ಞೆ ಅನ್ವಯವಾಗಲಿದೆ. ಶವಸಂಸ್ಕಾರ ಹಾಗೂ ಮದುವೆಗಳಿಗೆ ಮಾತ್ರ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ.

ಇಷ್ಟೇ ಅಲ್ಲದೆ ಫಲಿತಾಂಶ ಬಂದ ನಂತರ ಪಟಾಕಿ ಸಿಡಿಸಿ ಸಂಭ್ರಮಿಸುವುದು, ಪ್ರತಿಕೃತಿ ದಹಿಸುವುದು ಹಾಗೂ ಬಹಿರಂಗವಾಗಿ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!