ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ. ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ರಾಜ್ಯ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ.
ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದೇಶ ಹೊರಡಿಸಿದ್ದು, ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ನೇಮಕ ಮಾಡಲಾಗಿದೆ.