ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾಜ್ಯ ಬಿಜೆಪಿ ಕೋರ್ ಸಮಿತಿ ಸಭೆ ನಡೆಯಲಿದೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಸಭೆಯಲ್ಲಿ ಬಿಜೆಪಿ ಸದಸ್ಯತ್ವ ಹೋರಾಟ, ಉಪಚುನಾವಣೆ ಸಿದ್ಧತೆ, ಆಡಳಿತ ವಿರೋಧಿ ಹೋರಾಟ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ರಾಜ್ಯ ಸರ್ಕಾರದ ವಿರುದ್ಧ ಎರಡನೇ ಹಂತದ ಪಾದಯಾತ್ರೆ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.