ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯ ಬಿಜೆಪಿ ಕೋರ್ಕ್ ಕಮಿಟಿ ಸಭೆ ಜೂನ್.18ರ ಶುಕ್ರವಾರದಂದು ಸಂಜೆ 5 ಗಂಟೆಗೆ ನಿಗದಿ ಮಾಡಲಾಗಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸಭೆ ಜೂನ್ 18ಕ್ಕೆ ನಿಗದಿಯಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವಂತ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಶುಕ್ರವಾರ ಸಂಜೆ 5 ಗಂಟೆಗೆ ನಡೆಯಲಿದೆ.
ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯ ಕುರಿತಂತೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ, ಬಿಜೆಪಿ ಕೋರ್ ಕಮಿಟಿ ಸಭೆಯ ಬಗ್ಗೆ ಈಗ ತೀವ್ರ ಕುತೂಹಲ ಕೆರಳಿಸಿದ್ದು, ಈ ವೇಳೆ ಅರುಣ್ ಸಿಂಗ್ ಬಳಿ, ಶಾಸಕರು ತಮ್ಮ ಅಭಿಪ್ರಾಯ ಕೂಡ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.