Sunday, November 27, 2022

Latest Posts

ಎಸ್ಸಿ, ಎಸ್ಟಿ ಸಮುದಾಯದ ನಾಲ್ಕು ದಶಕಗಳ ಬೇಡಿಕೆ ಈಡೇರಿಸಿದ ರಾಜ್ಯ ಬಿಜೆಪಿ ಸರ್ಕಾರ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಹಾವೇರಿ:

ಕಳೆದ ನಾಲ್ಕು ದಶಕಗಳಿಂದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ಎಸ್ಸಿ, ಎಸ್ಟಿ ಸಮುದಾಯದ ಬೇಡಿಕೆಯನ್ನು ಭಾರತೀಯ ಜನತಾ ಪಕ್ಷ ಇಡೇರಿಸುವ ಮೂಲಕ ಈ ಸಮುದಾಯಗಳ ಬೇಡಿಕೆಯನ್ನು ಈಡೇರಿಸುವ ಕೆಲಸವನ್ನು ಮಾಡಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ಬಿಜೆಪಿ ಜಿಲ್ಲಾ ಘಟಕ ವತಿಯಿಂದ ಶನಿವಾರ ನಗರದ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಆಯೋಜಿಸಿದ್ದ ಬಳ್ಳಾರಿಯಲ್ಲಿ ಜರುಗುವ ಪರಿಶಿಷ್ಟ ಪಂಗಡದ ಬೃಹತ್ ಸಮಾವೇಶದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು
ಕೇಂದ್ರ ಸರ್ಕಾರ ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಿದಂತೆ ರಾಜ್ಯವನ್ನಾಳಿದ ಹಿಂದಿನ ಸರ್ಕಾರಗಳು ಮೀಸಳಾತಿ ಹೆಚ್ಚಳ ಮಾಡಬೇಕಾಗಿತ್ತು. ಆದರೆ ಹಿಂದಿನ ಯಾವ ಸರ್ಕಾರಗಳು ಮಾಡಲಿಲ್ಲ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ಗುಂಡಿಗೆ ಧೈರ್ಯ ಮಾಡಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಕೆಲಸವನ್ನು ಮಾಡಿದರು ಎಂದರು.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭಧಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಕ್ರಮ ಕೈಗೊಂಡರು, ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಸಹ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾಯಿತು. ಭೂರಹಿತರಿಗೆ ಭೂಮಿ ಕೊಡಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದು ತಿಳಿಸಿದರು.
ಬರುವ ಅಧಿವೇಶನದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಪ್ರತ್ಯೇಕ ಸಚಿವಾಲಯ ಪ್ರಾರಂಭಿಸಲು ಕ್ರ ಮತ್ತು ಅದಕ್ಕೆ ನನ್ನನ್ನೇ ಸಚಿವರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜು ಕಲಕೋಟಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರಕಾರಗಳಿಂದ ಬದಲಾವಣೆಯ ಗಾಳಿ ಬೀಸುತ್ತಿದೆ. ಭ್ರಷ್ಠಾಚಾರ ರಹಿತ ಆಡಳಿತವನ್ನು ಬಿಜೆಪಿ ಸರಕಾರ ನೀಡುತ್ತಿದೆ ಎಂದು ತಿಳಿಸಿದರು.
ರಾಜ್ಯ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಓಲೇಕಾರ ಪ್ರಾಸ್ತಾವಿಕ ಮಾತನಾಡಿ, ೪೦ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಶ್ರಮಿಸಿದ್ದರ ಪರಿಣಾಮ ಮೀಸಲಾತಿ ಹೆಚ್ಚಳವಾಗಿದೆ. ಇದರ ಹಿಂದೆ ಶ್ರೀರಾಮುಲು ಅವರ ಅವಿರತ ಶ್ರಮವೂ ಕೂಡ ಪ್ರಮುಖದ್ದಾಗಿದೆ. ನವೆಂಬರ್ ೨೦ ರಂದು ಬಳ್ಳಾರಿಯಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ಹೋಗೋಣ. ಶ್ರೀ ರಾಮುಲು ಅವರ ಕೈ ಬಲಪಡಿಸಲು ಮುಂದಾಗೋಣ ಎಂದರು.
ಶಾಸಕ ಅರುಣಕುಮಾರ ಗುತ್ತೂರ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಂಜಣ್ಣ, ಹನುಮಂತಪ್ಪ ಚಳಗೇರಿ, ವೀರಪ್ಪ ಇಟಗಿ, ಮಹಿಳಾ ಘಟಕದ ಮಂಜಕ್ಕ ಸೇರಿದಂತೆ ಮತ್ತಿತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!