ಅಮಿತ್ ಶಾ ಭೇಟಿಯಾದ ರಾಜ್ಯ ಬಿಜೆಪಿ ನಾಯಕರು: ಹೊಟೇಲ್‌ ಸುತ್ತ ಬಿಗಿ ಭದ್ರತೆ

ಹೊಸದಿಗಂತ ವರದಿ ಹುಬ್ಬಳ್ಳಿ:

ನಗರದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ ಬಿಜೆಪಿ ಹಲವಾರು ನಾಯಕರು ಹೋಟೆಲ್‌ಗೆ ತೆರಳಿ ಭೇಟಿ ಮಾಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಶುಕ್ರವಾರ ರಾತ್ರಿ 11.30ಕ್ಕೆ ಬಂದಿರುವ ಶಾ, ಡೆನಿಸನ್ಸ್ ಹೋಟೆಲ್’ನಲ್ಲಿ ವಾಸ್ತವ್ಯ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಮುರುಗೇಶ ನಿರಾಣಿ, ಗೋವಿಂದ ಕಾರಜೋಳ, ಶಾಸಕರಾದ ಅರವಿಂದ ಬೆಲ್ಲದ, ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಸೇರಿದಂತೆ ಮಾಜಿ ಶಾಸಕರು, ಪಾಲಿಕೆ ಸದಸ್ಯರು, ಬ್ಲಾಕ್ ಕಮಿಟಿ ಅಧ್ಯಕ್ಷರು ಆಗಮಿಸುತ್ತಿದ್ದಾರೆ. ಪಾಸ್ ಪಡೆದವರಿಗಷ್ಟೇ ಹೋಟೆಲ್ ಒಳಗೆ ಪ್ರವೇಶ ನೀಡಲಾಗುತ್ತಿದೆ.
‘ಹೋಟೆಲ್’ನ ಆರನೇ ಮಹಡಿಯ ಸಭಾಭವನದಲ್ಲಿ ಸಚಿವ ಶಾ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜನ್ಮದಿನದ ಶುಭಕೋರಿ, ಸನ್ಮಾನ ನಡೆಸಲಾಗಿದೆ. ರಾಜ್ಯ ರಾಜಕೀಯದ ಬೆಳವಣಿಗೆ ಕುರಿತು ಶಾ ಮಾಹಿತಿ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡೆನಿಸನ್ಸ್ ಹೋಟೆಲ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೋಟೆಲ್ ಎದುರಿನ ರಸ್ತೆಯ ಎರಡು ಕಡೆ ಪೊಲೀಸ್ ವ್ಯಾನ್ ನಿಲ್ಲಿಸಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಹೋಟೆಲ್’ಗೆ ತೆರಳುವವರನ್ನು ಸೂಕ್ಷ್ಮವಾಗಿ ಪರೀಕ್ಷಿಸಿ ಬಿಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!