ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭ: ಇಂದೇ ಪ್ರತಿಪಕ್ಷ ನಾಯಕರ ಆಯ್ಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದ್ದು, ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಹೈಕಮಾಂಡ್​ನಿಂದ ಆಗಮಿಸಿರುವ ವೀಕ್ಷಕರು ಅಭಿಪ್ರಾಯ ಸಂಗ್ರಹ ಕಾರ್ಯ ನಡೆಸಲಿದ್ದಾರೆ.ನಂತರ ಹೈಕಮಾಂಡ್​ಗೆ ವರದಿ ಸಲ್ಲಿಸಲಿದ್ದು, ನಂತರ ಹೈಕಮಾಂಡ್​ನಿಂದ ಹೆಸರು ಪ್ರಕಟವಾಗಲಿದೆ.

ಬೆಂಗಳೂರಿನ ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ.
ಇತ್ತ ಸಭೆ ಆರಂಭಕ್ಕೂ ಮುನ್ನ ಹೋಟೆಲ್​ಗೆ ಬಂದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅಲ್ಲಿಂದ ನಿರ್ಗಮಿಸಿದ್ದು, ಶಾಸಕಾಂಗ ಸಭೆ ಆರಂಭವಾದರೂ ಮತ್ತೆ ವಾಪಸ್​ ಆಗಿಲ್ಲ.
ಇನ್ನು ದೆಹಲಿ ಪ್ರವಾಸದಲ್ಲಿರುವ ಎಸ್.ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಗೈರಾಗಿದ್ದು ಇತರ ನಾಯಕರು ಆಗಮಿಸಿದ್ದಾರೆ.

ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಬಿಜೆಪಿ ನಾಯಕರು ಉಪಸ್ಥಿತರಿದ್ದಾರೆ.

ಹೈಕಮಾಂಡ್​ನ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್ ಮತ್ತು ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!