ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಸುಶೀಲ ಶಿವಪ್ಪ ನಿಧನ

ಹೊಸದಿಗಂತ ವರದಿ ಮಡಿಕೇರಿ:

ರಾಜ್ಯ ಬಿಜೆಪಿಯ ಭೀಷ್ಮ,ಅಜಾತ ಶತ್ರು ದಿವಂಗತ ಬಿ.ಬಿ.ಶಿವಪ್ಪನವರ ಧರ್ಮ ಪತ್ನಿ ಸುಶೀಲ ಶಿವಪ್ಪ(91) ಕುಂಬ್ರಳ್ಳಿಯ ತಮ್ಮ ನಿವಾಸದಲ್ಲಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರಿಯೆಯು ನಾಳೆ (ಮಂಗಳವಾರ)ಮದ್ಯಾಹ್ನದ ನಂತರ ಕುಂಬ್ರಲ್ಲಿ ಯಲ್ಲಿ ನಡೆಯಲಿದೆ.ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸುಶೀಲಮ್ಮ ನಿಧನಕ್ಕೆ ಶಾಸಕ ಎಂ. ಪಿ. ಅಪ್ಪಚ್ಚು ರಂಜನ್,ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!