ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಕೊಠಡಿಗಳ ನಿರ್ಮಾಣಕ್ಕೆ 550 ಕೋಟಿ ಅನುದಾನ ನೀಡುವುದಾಗಿ
ಘೋಷಿಸಿದ್ದಾರೆ.
ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗಳಿಗೆ 310 ಕೋಟಿ ರೂ.ಗಳು ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ ರೂ. ಸೇರಿದಂತೆ ಒಟ್ಟು 550 ಕೋಟಿ ರೂ.ಗಳ ವೆಚ್ಚದಲ್ಲಿ 8,311 ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.