ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಕಾರ್ಪಸ್ ಫಂಡ್ ಅನ್ನು ಘೋಷಿಸಿದ್ದಾರೆ.
ISEC ಸಂಸ್ಥೆಯಲ್ಲಿ Ph.D. ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಫೆಲೋಶಿಪ್ ನೀಡಲು ಎರಡು ಕೋಟಿ ರೂ. Corpus Fund ನೀಡಲಾಗುವುದು ಎಂದು ಹೇಳಿದ್ದಾರೆ.
‘ಸ್ವಾವಲಂಬಿ ಸಾರಥಿ’ ಯೋಜನೆಯಡಿ ಎಸ್‌ಸಿ, ಎಸ್‌ಟಿ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲದ ಶೇ.75 ರಷ್ಟು, ಗರಿಷ್ಠ ನಾಲ್ಕು ಲಕ್ಷ ರೂ. ಸಹಾಯಧನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.