ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರದ ಸಲಹೆಯಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಪಿಎಂಸಿ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಈ ಕಾಯ್ದೆಗೆ ಭಾರೀ ವಿರೋಧವೂ ವ್ಯಕ್ತವಾಗಿತ್ತು. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಸದನದಲ್ಲೂ ಮಂಡಿಸಲಾಗಿತ್ತು.
ದೇಶದ ಕೆಲವು ಕಡೆಗಳಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಈ ವಿಧೇಯಕವನ್ನು ಕೇಂದ್ರ ಹಿಂಪಡೆದಿತ್ತು. ರಾಜ್ಯ ಸರ್ಕಾರ ಮಾತ್ರ ಹಿಂಪಡೆದಿರಲಿಲ್ಲ. ಇದೀಗ ಎಪಿಎಂಪಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.