ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಷ್ಮೆ ಕೃಷಿ ನಂಬಿರುವವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಸಿಹಿ ಸುದ್ದಿ ನೀಡಿದ್ದಾರೆ. ರೇಷ್ಮೇ ಖರೀದಿಗೆ ಐದು ಲಕ್ಷ ರೂ. ವರೆಗೂ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವುದಾಗಿ ಘೋಷಿಸಿದ್ದಾರೆ.
ಇಂದು ತಮ್ಮ 14ನೇ ಬಜೆಟ್ ಮಂಡನೆ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ರೇಷ್ಮೆ ಕೃಷಿಗೆ ವಿಶೇಷ ಒತ್ತು ನೀಡಿದರು. ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಷ್ಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ. ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.