ಹೊಸದಿಗಂತ ವರದಿ, ಕಲಬುರಗಿ:
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ( ಕೆ.ಕೆ.ಆರ್.ಡಿ.ಬಿ.)ಗೆ 1500 ಕೋಟಿ ರೂಪಾಯಿ ಅನುದಾನ ಮೀಸಲಿಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ವಿಧಾನಸೌಧದಲ್ಲಿಂದು ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಕೆ.ಕೆ.ಆರ್.ಡಿ.ಬಿ 1,500 ಕೋಟಿ ರೂ.ಅನುದಾನ ಮೀಸಲಿಡುವುದಾಗಿ ಘೋಷಿಸಿದರು. ಅಲ್ಲದೆ, ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಟ್ಟ ಗಾಯಗಳ ಚಿಕಿತ್ಸಾ ಕೇಂದ್ರ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗ ಆರಂಭಿಸುವುದಾಗಿ ಹೇಳಿದರು.
ಕಲಬುರಗಿ ತಾಲ್ಲೂಕಿನ ಫಿರೋಜಾಬಾದ್ ನಲ್ಲಿ 500 ಮೆಗಾವ್ಯಾಟ್ ಸಾಮಥ್ರ್ಯದ ಸೌರಶಕ್ತಿ ಪಾರ್ಕ್ ಸ್ಥಾಪನೆ ಮಾಡುವುದಾಗಿ ಘೋಷಣೆ ಆಗಿದೆ.