ರಾಜ್ಯ ಬಜೆಟ್ : ಸಿಎಂ ಸಿದ್ದರಾಮಯ್ಯರಿಂದ ಸಿದ್ಧತೆ ಆರಂಭ, ಫೆ.6ರಿಂದ ಪೂರ್ವಭಾವಿ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

25-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ಗುರುವಾರದಿಂದ 5 ದಿನಗಳ ಕಾಲ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಗಳನ್ನು ನಡೆಸಲಿದ್ದಾರೆ.

ಸಿದ್ದರಾಮಯ್ಯ ಅವರು, ಗುರುವಾರ 13 ಇಲಾಖೆಗಳ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ, ನಂತರ ಶುಕ್ರವಾರ, ಶನಿವಾರ, ಸೋಮವಾರ ಮತ್ತು ಮುಂದಿನ ಗುರುವಾರ ಮತ್ತಷ್ಟು ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಕರ್ನಾಟಕ ವಿದ್ಯುತ್ ನಿಗಮ ಲಿಮಿಟೆಡ್ (ಕೆಪಿಸಿಎಲ್) ಕಚೇರಿ ಕಟ್ಟಡದಲ್ಲಿ ಬಜೆಟ್ ಪೂರ್ವ ಸಭೆಗಳು ನಡೆಯಲಿವೆ. 30 ನಿಮಿಷಗಳ ಸಭೆಗಳಲ್ಲಿ, ಸಿಎಂ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳು ಇಲಾಖೆಯ ಬಜೆಟ್ ಪ್ರಸ್ತಾವನೆಗಳನ್ನು ಪರಿಶೀಲಿಸಲಿದ್ದಾರೆ.

ತಮ್ಮ ದಾಖಲೆಯ 16 ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯ ಅವರು, ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ ನೀಡುವ ಸವಾಲನ್ನು ಎದುರಿಸುತ್ತಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವ ಮೂಲಕ ಸರ್ಕಾರ ಅಭಿವೃದ್ಧಿಯನ್ನು ನಿರ್ಲಕ್ಷಿಸುತ್ತಿದೆ ಎಂದು ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಆರೋಪಿಸಿದ್ದು, ಹಲವು ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಹಣ ಸಿಗದಿರುವ ಬಗ್ಗೆ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದರು. ಗೃಹ ಸಚಿವ ಜಿ ಪರಮೇಶ್ವರ ಅವಕು ಇತ್ತೀಚೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯ ನಂತರ, ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಮಗಾರಿಗಳಿಗೆ ತಲಾ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದರು.

2025-26 ನೇ ಸಾಲಿನ ಬಜೆಟ್‌ ಅನ್ನು ಹಣಕಾಸು ಇಲಾಖೆಯ ಜವಾಬ್ದಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 14 ರಂದು ಮಂಡಿಸಲಿದ್ದು, ಇದು ಸಿದ್ದರಾಮಯ್ಯ ಅವರ 16ನೇ. ದಾಖಲೆಯ ಬಜೆಟ್‌ ಮಂಡನೆಯಾಗಿರಲಿದೆ,

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!