ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಫೆ.12ರಿಂದ 23ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ನಡೆಸಲು ಕರ್ನಾಟಕ ಸಚಿವ ಸಂಪುಟ ಗುರುವಾರ ನಿರ್ಧರಿಸಿದ್ದು, ಫೆ.16ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಘೋಷಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಫೆಬ್ರವರಿ 12 ರಂದು ಜಂಟಿ ಅಧಿವೇಶನದ ಆರಂಭದ ದಿನದಂದು ರಾಜ್ಯಪಾಲರ ಭಾಷಣ ನಡೆಯಲಿದೆ ಎಂದು ಪಾಟೀಲ್ ಹೇಳಿದರು.
“ಜಂಟಿ ಶಾಸಕಾಂಗವು ಫೆಬ್ರವರಿ 12 ರಿಂದ ಪ್ರಾರಂಭವಾಗಲಿದ್ದು, ರಾಜ್ಯ ಬಜೆಟ್ ಅನ್ನು ಫೆ. 16 ರಂದು ಮಂಡಿಸಲಾಗುತ್ತದೆ. ಅಧಿವೇಶನವು ಫೆಬ್ರವರಿ 23 ರಂದು ಮುಕ್ತಾಯಗೊಳ್ಳುತ್ತದೆ. ರಾಜ್ಯಪಾಲರು ಫೆಬ್ರವರಿ 12 ರಂದು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾನೂನು ಸಚಿವರು ಹೇಳಿದರು.
ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 15ನೇ ಬಜೆಟ್ ಮಂಡನೆ ಇದಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ 13 ಬಜೆಟ್ ಮಂಡಿಸಿದ್ದರು.