Wednesday, March 29, 2023

Latest Posts

ನಾಳೆಯಿಂದ ರಾಜ್ಯ ಬಜೆಟ್ ಅಧಿವೇಶನ: ಶಾಸಕರು ನಿರ್ಲಕ್ಷ್ಯ ಮಾಡದೇ ಹಾಜರಾಗಿ ಎಂದ ಸ್ಪೀಕರ್ ಕಾಗೇರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆಯಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಶಾಸಕರು ನಿರ್ಲಕ್ಷ್ಯ ಮಾಡದೇ ಅಧಿವೇಶನಕ್ಕೆ ಹಾಜರಾಗುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಶಾಸಕರು 5 ವರ್ಷ ಯಶಸ್ವಿಯಾಗಿ ಮುಗಿಸಿದ್ದೀರಿ. ಕೊನೆ ಅಧಿವೇಶನ ಎಂದು ನಿರ್ಲಕ್ಷ್ಯ ಬೇಡ. ಪ್ರಜಾಪ್ರಭುತ್ವ ದೇಗುಲ ಎಂದು ಕರೆಯಲಾಗುವ ಸದನ ಇದು. ಸದಸ್ಯರು ಜವಾಬ್ದಾರಿಯುತವಾಗಿ ನಡೆದುಕೊಂಡು ಅಧಿವೇಶನದಲ್ಲಿ ಭಾಗವಹಿಸುವಂತೆ ಸೂಚಿಸಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲರು ವಿಧಾನಮಂಡಲದ ಉಭಯ ಸದನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 17ರಂದು ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 20ರಿಂದ 24ರವರೆಗೆ ಬಜೆಟ್ ಮೇಲೆ ಚರ್ಚೆ ನಡೆಯಲಿದೆ ಎಂದು ವಿವರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!