March 15, 2026
Sunday, March 15, 2026
spot_img

ಪಂಚ ರಾಜ್ಯಗಳ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಶಾಸಕ ಸಲೀಂ ಅಹ್ಮದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಚರ್ಚೆ ಮುನ್ನೆಲೆಗೆ ಬಂದಿದ್ದು, ಪಂಚ ರಾಜ್ಯಗಳ ಚುನಾವಣೆ ನಂತರ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ತಿನ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆವಿದ್ದು, ಬಳಿಕ ಸಂಪುಟ ವಿಸ್ತರಣೆ ನಡೆಯಲಿದ್ದು, ಈ ಬಾರಿ ಹೊಸಬರಿಗೆ ಅವಕಾಶ ನೀಡಬೇಕೆಂಬ ಬೇಡಿಕೆ ಇದೆ ಎಂದು ತಿಳಿಸಿದರು.

ಇನ್ನು ಅಧಿಕಾರ ಹಂಚಿಕೆ ಹಾಗೂ ಸಿಎಂ ವಿಚಾರದಲ್ಲಿ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !