ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಪಕ್ಷದೊಂದಿಗೆ ವಿವಿಧ ಹೆಸರುಗಳ ಬಗ್ಗೆ ಚರ್ಚಿಸಿದ್ದಾರೆ, ನಾವು ಈಗ ಅದನ್ನು ಅವರಿಗೆ ನಿರ್ಧರಿಸಲು ಬಿಟ್ಟಿದ್ದೇವೆ. ಕರ್ನಾಟಕದಲ್ಲಿ ನಾಳೆ ಸಂಪುಟ ಪ್ರಮಾಣವಚನ ಸ್ವೀಕರಿಸಲಾಗುವುದು ಎಂದು ಅವರು (ಸಿದ್ದರಾಮಯ್ಯ) ನನಗೆ ತಿಳಿಸಿದ್ದರು’ ಎಂದು ಸುರ್ಜೇವಾಲಾ ಹೇಳಿದರು.