ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 7ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 07-09-2023ರ ಗುರುವಾರದಂದು ಸಂಜೆ 4 ಗಂಟೆಗೆ ಮಹತ್ವದ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ ಎಂದಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸೋದಕ್ಕೆ ಅನುಮೋದನೆ ನೀಡಲಿದ್ದಾರೆ. ಅಲ್ಲದೇ ಯುವನಿಧಿ ಜಾರಿಯ ಬಗ್ಗೆಯೂ ಮಹತ್ವದ ಚರ್ಚೆಯನ್ನು ನಡೆಸಲಿದ್ದಾರೆ.