ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 1081 ಕೋಟಿ ರೂ. ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಣ ಸಂಬಂಧ ಸಣ್ಣ ನೀರಾವರಿ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 83 ಕೆರೆಗಳ ಭರ್ತಿ ಮಾಡುವುದು. 1081 ಕೋಟಿ ರೂಪಾಯಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಿಸಿ ಆ ನೀರನ್ನು ಕೆರೆಗಳಿಗೆ ಹರಿಸಲು ಸಂಪುಟ ಸಭೆ ಸಮ್ಮತಿಸಿದೆ.
ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್, ಸಭೆಯಲ್ಲಿ ಕೈಗೊಳ್ಳಲಾದ ಪ್ರಮುಖ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ವಿಪತ್ತು ನಿರ್ವಹಣೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿದ್ದು, ಸಾರಿಗೆ ನಿಗಮಗಳ 79 ಕೋಟಿ ರೂ. ಮೋಟಾರ್ ವೆಹಿಕಲ್ ಟ್ಯಾಕ್ಸ್ ವಿನಾಯಿತಿ ನೀಡಲು ತಿರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.