ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ವಿಧಾನಸೌಧದಲ್ಲಿ ಇಂದು ಬೆಳಿಗ್ಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಚಳಿಗಾಲದ ಅಧಿವೇಶನದ ವೇಳಾಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಗಣಿಗಾರಿಕೆ ವಲಯದಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರಗಳನ್ನು ಬೇರುಸಹಿತ ಕಿತ್ತೊಗೆಯಲು ಲೋಕಾಯುಕ್ತದ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವ ಕುರಿತು ಸಂಪುಟ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಈ ಬಾರಿಯ ಚಳಿಗಾಲ ಅಧಿವೇಶನ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಸಂಪುಟವು ಡಿಸೆಂಬರ್ 9-20 ಅಥವಾ ಡಿಸೆಂಬರ್ 16-28 ರಂದು ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆಗಳಿವೆ.