ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂಬ ಚರ್ಚೆ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ನಿಮ್ಮಲ್ಲಿ (ಮಾಧ್ಯಮ) ಮನವಿ ಮಾಡುತ್ತೇನೆ ಎಂದು ತಿಳಿಸಿದರು.