Sunday, December 3, 2023

Latest Posts

ರಾಜ್ಯ ಕಾಂಗ್ರೆಸ್ ಸರ್ಕಾರ ಸುಭದ್ರ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಹೊಸದಿಗಂತ ವರದಿ, ಬೆಳಗಾವಿ:

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಐದು ವರ್ಷಗಳನ್ನು ಪೂರೈಸಲಿದ್ದು, ಸರ್ಕಾರ ಪತನವಾಗಲಿದೆ ಎಂಬುದರಲ್ಲಿ ಹುರುಳಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ತಿಳಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವೊಂದು ಶಾಸಕರು ಸಿದ್ಧರಾಮಯ್ಯ ಪರವಾಗಿ ಕೆಲವೊಂದು ಶಾಸಕರು ಡಿ.ಕೆ.ಶಿವಕುಮಾರ ಅವರ ಪರವಾಗಿ ಮಾತನಾಡುತ್ತಿದ್ದಾರೆ. ಬಹುಶಃ ಸಚಿವರಾಗಬೇಕೆಂದು ಕೊಂಡು ಆ ರೀತಿ ಹೇಳಿಕೆಗಳನ್ನು ಕೊಡುತ್ತಿರಬಹುದು ಎಂದರು.

ಮುಖ್ಯಮಂತ್ರಿಯನ್ನು ಮಾಡುವುದು ಹೈಕಮಾಂಡ್. ಶಾಸಕರು ಹೇಳಿದ ತಕ್ಷಣ ಯಾರೂ ಮುಖ್ಯಮಂತ್ರಿ ಆಗುವುದಿಲ್ಲ. ಶಾಸಕರಿಗೆ ಆ ಪರಮಾಧಿಕಾರ ಇಲ್ಲ. ಕೇವಲ ಅವರು ತಮ್ಮ ಅಭಿಪ್ರಾಯ ಹೇಳಬಹುದು ಎಂದು ಇತ್ತೀಚೆಗೆ ಕಾಂಗ್ರೆಸ್ ಶಾಸಕರ ಹೇಳಿಕೆಗಳನ್ನು ಉಲ್ಲೇಖಿಸಿ ಸಮಜಾಯಿಸಿ ನೀಡಿದರಲ್ಲದೇ, ಕಾಂಗ್ರೆಸ್ ಶಾಸಕರು ನಿಯಮ ಮೀರಿ ಅಶಿಸ್ತು ತೋರಿದರೆ ಅಂತಹವರ ವಿರುದ್ಧ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಸಿದರು.

ಸರ್ಕಾರ ಅಧಿಕಾರಕ್ಕೆ ಬಂದ ನೂರು ದಿನಗಳ ಒಳಗೆ ಪ್ರಣಾಳಿಕೆಯಲ್ಲಿ ಘೋಷಿಸಿದಂತಹ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದೇವೆ. ಐದನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಜನೆವರಿಯಲ್ಲಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೀಗಾಗಿ, ಸರ್ಕಾರ ನುಡಿದಂತೆ ನಡೆದಿದೆ ಎಂದರು.

ಬಿಜೆಪಿಗೆ ಇಲ್ಲಿಯವರೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಆದರೆ, ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನಿಟ್ಟಿರುವ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಾರೆ. ಅವರ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಅವರ ಅಭಿಪ್ರಾಯ ವ್ಯಕ್ತಪಡಿಸಿದರು.

ಮೈತ್ರಿಯಿಂದ ನಷ್ಟವಿಲ್ಲ 
ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ, ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!