ಹೊಸದಿಗಂತ ವರದಿ, ಹಾಸನ :
ಒಕ್ಕಲಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಭಗವಾನ್ ಹಾಗೂ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಕಮಿಷನ್ ದಂಧೆಯಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಪಕ್ಷದವತಿಯಿಂದ ಅ.೧೬ ರಂದು ಪ್ರತಿಭಟನೆಗೆ ಕರೆ ನೀಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಹಿಂದೂ ವಿರೋಧಿ ಮಾನಸಿಕತೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಭಗವಾನ್ ,ಒಕ್ಕಲಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ, ಭ್ರಷ್ಟಾಚಾರದಲ್ಲಿ ಕಮಿಷನ್ ದಂಧೆಯಲ್ಲಿ ಭಾಗಿಯಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ವಿದ್ಯುತ್ ಅನಿಮಿಯತ ಲೋಡ್ ಶೆಡ್ಡಿಂಗ್ ನಿಂದಾಗಿ ರೈತರಿಗೆ, ಉದ್ಯಮಿಗಳಿಗೆ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಖಂಡಿಸಿ ಬಿಜೆಪಿ ಹಾಸನ ನಗರ ಹಾಗೂ ಗ್ರಾಮಾಂತರ ಮಂಡಲದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅ.೬ ರಂದು ಸೋಮವಾರ ಬೆಳಗ್ಗೆ ೧೨ ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಜನಪ್ರತಿನಿಧಿಗಳು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ವೇಣಿಗೋಪಾಲ್ ತಿಳಿಸಿದ್ದಾರೆ.