ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಅಭಿಪ್ರಾಯ ಸಂಗ್ರಹ ಮಾಡಿಲ್ಲ. ಪಕ್ಷದ ಶಾಸಕರ ರಿಪೋರ್ಟ್ ಕಾರ್ಡ್ ಪಡೆಯುತ್ತಿದ್ದೇನೆ. 2 ವರ್ಷದಿಂದ ಕ್ಷೇತ್ರದಲ್ಲಿ ಏನು ಕೆಲಸ ಮಾಡಿದ್ದಾರೆಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆ, ಬೇಡಿಕೆಗಳ ಬಗ್ಗೆಯೂ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಮುಂಚೂಣಿ ಘಟಕಗಳ ಕಾರ್ಯದ ಬಗ್ಗೆಯೂ ಮಾಹಿತಿ ಪಡೆಯುತ್ತಿದ್ದೇನೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಅನುಕೂಲತೆ ಬಗ್ಗೆ ಮಾಹಿತಿ, ಜನರ ಬದುಕು ಹೇಗೆ ಬದಲಾಯಿಸುತ್ತಿದೆ ಎಂಬ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದರು.