ಕೇಂದ್ರದ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯ ಜನಾಕ್ರೋಶ ಪ್ರತಿಭಟನೆಗೆ ಪ್ರತಿಯಾಗಿ, ನಗರದ ಫ್ರೀಡಂ ಪಾರ್ಕ್​ನಲ್ಲಿ ಕಾಂಗ್ರೆಸ್​​ನಿಂದ ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ನಿರಂತರ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಎಲ್​​ಪಿಜಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸೇರಿದಂತೆ ಕೇಂದ್ರದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್​​ ನಾಯಕರು ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ₹50 ಏರಿಕೆ ಮಾಡಿದ್ದಾರೆ. ಅದು ಲಜ್ಜೆಗೆಟ್ಟ ಸರ್ಕಾರವಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್​​ಗೆ ಪ್ರತಿಭಟನೆ ಮಾಡುವ ಯಾವುದೇ ನೈತಿಕತೆ ಇಲ್ಲ‌. ಅವರಿಗೆ ಮಾನ, ಮರ್ಯಾದೆ ಇದ್ದರೆ ಪ್ರತಿಭಟನೆ ಮಾಡುತ್ತಿರಲಿಲ್ಲ. ಅವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ ಎಂದು ವಾಗ್ದಾಳಿ ನಡೆಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!