ಹೊಸದಿಗಂತ ವರದಿ ವಿಜಯಪುರ:
ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ರಾಜ್ಯ ಕಾಂಗ್ರೆಸ್ ಸಚಿವರಿಗೆ ಹೆದರಿಕೆ ಇದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಾಕಿಸ್ತಾನ- ಭಾರತ ಕದನದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಕದನ ವಿರಾಮದಲ್ಲಿ ಕಾಂಗ್ರೆಸ್ ಸಚಿವರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ, ಮೋದಿಯವರಿಗೆ ಅವಮಾನ ಮಾಡುವುದು ಕಾಂಗ್ರೆಸ್ ಸಚಿವರ ಕೆಟ್ಟ ಉದ್ದೇಶವಾಗಿದೆ ಎಂದರು.
ಕೆಂದ್ರ ಸರ್ಕಾರದಿಂದ ಅನುದಾನ ಎಲ್ಲ ಇಲಾಖೆಗೆ ಬಂದಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಮೋದಿ ವಿರುದ್ಧ ಮಾತನಾಡುವುದು ಖಂಡನೀಯ ಎಂದರು.