ರಾಜ್ಯ ಚುನಾವಣೆ: ಕೊಪ್ಪಳದ ಅಂತಿಮ ಕಣದಲ್ಲಿ 69 ಅಭ್ಯರ್ಥಿಗಳು!

ಹೊಸದಿಗಂತ ವರದಿ,ಕೊಪ್ಪಳ:

ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾದ ಏಪ್ರೀಲ್ 24 ರಂದು 12 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ್ದ 81 ಅಭ್ಯರ್ಥಿಗಳ ಪೈಕಿ 12 ಜನರು ತಮ್ಮ ಉಮೇದುವಾರಿಕೆ ಹಿಂಪಡೆದಿದ್ದು, 69 ಅಭ್ಯರ್ಥಿಗಳು ಚುನಾವಣಾ ಅಂತಿಮ ಕಣದಲ್ಲಿದ್ದಾರೆ.
ಕ್ಷೇತ್ರವಾರು ನಾಮಪತ್ರ ಹಿಂಪಡೆದ ಅಭ್ಯರ್ಥಿಗಳ ವಿವರ: 60-ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 17 ಅಭ್ಯರ್ಥಿಗಳಲ್ಲಿ ಇಬ್ಬರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 15 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ., 61-ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 15 ಅಭ್ಯರ್ಥಿಗಳಲ್ಲಿ ಮೂವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 12 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
62-ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 21 ಅಭ್ಯರ್ಥಿಗಳಲ್ಲಿ ಇಬ್ಬರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 19 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ., 63-ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 14 ಅಭ್ಯರ್ಥಿಗಳಲ್ಲಿ ಮೂವರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 11 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ., 64-ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ 14 ಅಭ್ಯರ್ಥಿಗಳಲ್ಲಿ ಇಬ್ಬರು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದು, 12 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!