ರಾಜ್ಯ ಚುನಾವಣೆ: ಮೇ.10ರಂದು ಸಾರ್ವತ್ರಿಕ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ವಿಧಾನಸಭಾ ಚುನಾವಣೆ ಮೇ. 10 ರಂದು ನಡೆಯಲಿದ್ದು, ಈ ದಿನ ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ ( School and College ), ಸಂಘ-ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ( Public Holiday ) ಘೋಷಣೆ ಮಾಡಲಾಗಿದೆ.

ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಮಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ದಿನಾಂಕದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ( Government Employees ) ಚುನಾವಣಾ ಕರ್ತವ್ಯಕ್ಕೆ ( Election Duty ) ಹಾಜರಾಗತಕ್ಕದ್ದು. ಈ ಕ್ಷೇತ್ರಗಳಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ಧಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ದಿನಾಂಕ 09-05-2023ರ ಮಂಗಳವಾರದಂದು ಹಾಗೂ ಮತಏಣಿಕೆ ನಡೆಯುವ ದಿನಾಂಕ 13-05-2023ರಂದು ಮತ ಏಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧ ಪಟ್ಟ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!