ರಾಜ್ಯ ಚುನಾವಣೆ: ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳ ಅಂತಿಮ ಕಣದಲ್ಲಿ 60 ಅಭ್ಯರ್ಥಿಗಳು

ಹೊಸದಿಗಂತ ವರದಿ,ಹಾವೇರಿ:

ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಏ.೨೪ ರಂದು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಿಂದ ೨೪ ಅಭ್ಯರ್ಥಿಗಳು ನಾಮಪತ್ರ ಪತ್ರ ಹಿಂಪಡೆದಿದ್ದಾರೆ, ಅಂತಿಮ ಕಣದಲ್ಲಿ ೬೦ ಅಭ್ಯರ್ಥಿಗಳು ಉಳಿದಿದ್ದಾರೆ.
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಅಂತಿಮ ಕಣದಲ್ಲಿ ೧೨ ಅಭ್ಯರ್ಥಿಗಳು ಉಳಿದಿದ್ದಾರೆ. ಶಿಗ್ಗಾಂವ ವಿಧಾನಸಭಾ ಕ್ಷೇತ್ರದಲ್ಲಿ ಏಳು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು ೧೦ ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.
ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿ ಏಳು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಅಂತಿಮ ಕಣದಲ್ಲಿ ೧೦ ಅಭ್ಯರ್ಥಿಗಳು ಉಳಿದಿದ್ದಾರೆ. ಬ್ಯಾಡಗಿ ವಿಧಾನಸಭಾ ಕ್ಷೇತ್ರದಲ್ಲಿ ಓರ್ವ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಏಳು ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.
ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯು ನಾಮಪತ್ರ ಹಿಂಪಡೆದಿರುವುದಿಲ್ಲ, ಏಳು ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಏಳು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಅಂತಿಮ ಕಣದಲ್ಲಿ ೧೪ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!