ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದಿಂದ 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟ ಆಗಿದೆ. ‘ಜಂಟಲ್ಮ್ಯಾನ್’ ಸಿನಿಮಾದ ಅಭಿನಯಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ‘ಅತ್ಯುತ್ತಮ ನಟ’ ಪ್ರಶಸ್ತಿ ಪಡೆದಿದ್ದಾರೆ.
‘ಪಿಂಕಿ ಎಲ್ಲಿ’ ಸಿನಿಮಾದ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದಿದ್ದಾರೆ.
‘ಪಿಂಕಿ’ ಎಲ್ಲಿ ಸಿನಿಮಾಗೆ ಮೊದಲ ‘ಅತ್ಯುತ್ತಮ’ ಸಿನಿಮಾ ಪ್ರಶಸ್ತಿ ನೀಡಲಾಗಿದೆ.‘ವರ್ಣಪಟಲ’ ಸಿನಿಮಾಗೆ 2ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಸಿಕ್ಕಿದೆ. ‘ಹರಿವ ನದಿಗೆ ಮೈಯೆಲ್ಲ ಕಾಲು’ ಸಿನಿಮಾಗೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ.