ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ’ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರವರೆಗಿನ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಈ ಪ್ರಶಸ್ತಿಗಳನ್ನು ಸರ್ಕಾರವು 2001ನೇ ಸಾಲಿನಿಂದ ಪ್ರಾರಂಭಿಸಿದ್ದು, 2016 ರವರೆಗೆ ನಾಡಿನ 32 ಜನ ಹಿರಿಯ ಪತ್ರಕರ್ತರು ಈ ಎರಡೂ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಆದರೆ ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿದ್ದ 2017ರಿಂದ 2023ರ ವರೆಗಿನ ಏಳು ವರ್ಷಗಳ ಅವಧಿಯ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಹಿರಿಯ ಪತ್ರಕರ್ತರಾದ ಸನತ್ ಕುಮಾರ್ ಬೆಳಗಲಿ ಹಾಗೂ ಕೆ.ಶಿವಕುಮಾರ್ ಅವರಿದ್ದ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಅಭಿನಂದನಾ ಪತ್ರ ಒಳಗೊಂಡಿರುತ್ತದೆ.

ಪರಿಸರ ಪತ್ರಿಕೋದ್ಯಮ ಪ್ರಶಸ್ತಿ:
ವಿಜಯಲಕ್ಷ್ಮಿ ಶಿಬರೂರು ,ಬಿ.ಎಂ.ಟಿ ರಾಜೀವ್, ವಿನೋದಕುಮಾರ್ ಬಿ. ನಾಯ್ಕ ,ಮಾಲತೇಶ ಅಂಗೂರ ,ಸುಧೀರ್ ಶೆಟ್ಟಿ ,ಮಲ್ಲಿಕಾರ್ಜುನ ಹೊಸಪಾಳ್ಯ ,ಆರ್.ಮಂಜುನಾಥ್ (ಕೆರೆ ಮಂಜು) ಅವರಿಗೆ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟವಾಗಿದೆ.

ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ:
ಚೀ.ಜ.ರಾಜೀವ್ ,ದೇವಯ್ಯ ಗುತ್ತೇದಾರ್ ,ಗಿರೀಶ್ ಲಿಂಗಣ್ಣ ,ಯೋಗೇಶ್ ಎಂ.ಎನ್. ,ನೌಶಾದ್ ಬಿಜಾಪುರ ,ಸತೀಶ್ ಜಿ.ಟಿ ,ಎಸ್.ಗಿರೀಶ್ ಬಾಬು ಅವರಿಗೆ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಒದಗಿ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!