ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾರ್ವಜನಿಕ ಸೇವಾ ವಾಹನಗಳಲ್ಲಿ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್‌ ಡಿವೈಸ್ (ವಿಎಲ್​ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಿ.1ರಿಂದ ಈ ಆದೇಶ ಜಾರಿಗೆ ಬರಲಿದ್ದು, 2024ರ ನವೆಂಬರ್‌ 30ರೊಳಗೆ ಅಂದರೆ ಒಂದು ವರ್ಷದ ಅವಧಿಯೊಳಗೆ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಈ ಯೋಜನೆ ತ್ವರಿತವಾಗಿ ಜಾರಿಯಾಗಬೇಕಿರುವುದರಿಂದ ಆರ್​ಟಿಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣಕ್ಕೆ ಸೂಚನೆ ನೀಡಲಾಗಿದೆ.

ಬೆಲೆ ಎಷ್ಟು?

ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಬೆಲೆ 7,599 ರೂ.

ಯಾವ ವಾಹನಗಳಿಗೆ ಕಡ್ಡಾಯ?

ಸಾರ್ವಜನಿಕ ಸೇವಾ ವಾಹನಗಳು ಅಂದರೆ ಯೆಲ್ಲೋ ಬೋರ್ಡ್​ನ ಟ್ಯಾಕ್ಸಿಗಳು, ಕ್ಯಾಬ್​ಗಳು, ಖಾಸಗಿ ಬಸ್​ಗಳು, ನ್ಯಾಷನಲ್ ಪರ್ವಿುಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಈ ಆದೇಶ ಅನ್ವಯ.

ಇದು ಹೇಗೆ ಕೆಲಸ ಮಾಡುತ್ತದೆ ?

ವಿಎಲ್​ಟಿ ಮಾನಿಟರಿಂಗ್ ನಕ್ಷೆಯಲ್ಲಿ ವಾಹನದ ಲೊಕೇಷನ್‌ ಟ್ರ್ಯಾಕಿಂಗ್‌ ಮಾಡಲಾಗುತ್ತದೆ. ವಾಹನ ಎಲ್ಲಿದೆ? ಯಾವ ಮಾರ್ಗದಲ್ಲಿ ಪ್ರಯಾಣಿಸುತ್ತಿದೆ. ಮಾರ್ಗ ಬದಲಾವಣೆ ಸೇರಿ ಎಲ್ಲ ರೀತಿಯ ಮಾಹಿತಿಗಳು ಲಭ್ಯವಾಗಲಿದೆ.

ಅತಿವೇಗ, ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಸಂಬಂಧ ಎಚ್ಚರಿಕೆಯನ್ನು ಕೂಡ ಕೊಡಲಿದೆ.

ವಾಹನದಲ್ಲಿ ಪ್ರಯಾಣಿಸುವ ವೇಳೆ ತುರ್ತು ಪರಿಸ್ಥಿತಿ ಎದುರಾದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್​ಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಕಮಾಂಡ್ ಸೆಂಟರ್ ತಕ್ಷಣ ಸ್ಪಂದಿಸಲಿದ್ದು, ಸ್ಥಳೀಯ ಪೊಲೀಸರಿಗೆ ತಿಳಿಸಿ, ನೆರವಿಗೆ ಧಾವಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!