ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್ ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪರಿಹಾರ ಘೋಷಣೆ ಮಾಡಿದ್ದಾರೆ. ಮಂಗಳವಾರ ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ಮತ್ತು ಬೆಂಗಳೂರು ಮೂಲದ ಭರತ್ ಭೂಷಣ್ ಮೃತಪಟ್ಟಿದ್ದರು. ಇವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!