Saturday, December 9, 2023

Latest Posts

ರಾಜ್ಯ ಸರ್ಕಾರದಿಂದ KSRTC ಸೇರಿ 4 ನಿಗಮಗಳ ಅಧ್ಯಕ್ಷರಾಗಿ ‘ಸಚಿವ ರಾಮಲಿಂಗಾರೆಡ್ಡಿ’ ನೇಮಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಸಾರಿಗೆ ಇಲಾಖೆಯ 4 ನಿಗಮಗಳ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ನೇಮಕ ಮಾಡಿ ಸೋಮವಾರ ಸಂಜೆ ಆದೇಶ ಹೊರಡಿಸಲಾಗಿದೆ. ಬಿಎಂಟಿಸಿ, ಕೆಎಸ್​ಆರ್​ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಸಾಮಾನ್ಯವಾಗಿ ಈ ನಾಲ್ಕೂ ನಿಗಮಗಳಿಗೆ ಪ್ರತ್ಯೇಕವಾಗಿ ಅಧ್ಯಕ್ಷರ ನೇಮಕ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಒಬ್ಬರನ್ನೇ ನೇಮಕ ಮಾಡಲಾಗಿದೆ.

ಈ ಬಗ್ಗೆ ಇಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಆದೇಶದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದಂತ ರಾಲಿಂಗಾರೆಡ್ಡಿ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!