ಹೊಸದಿಗಂತ ಡಿಜಿಟಲ್ ಡೆಸ್ಕ್:
ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಈಗಾಗಲೇ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ ದೊರೆತಿರುವ ಕಾರಣ ಕೇಂದ್ರದ RITES ಸಂಸ್ಥೆಯ ಪ್ರತಿನಿಧಿಗಳು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶಾಸಕ ಗಾಲಿ ಜನಾರ್ದನ ರೆಡ್ಡಿಯವರ ನೇತೃತ್ವದಲ್ಲಿ ಪರಿಶೀಲನೆ ನಡೆಸಿದ್ದಾರೆ. 450 ಮೀ. ಉದ್ದದ ರೋಪ್ ವೇ ನಿರ್ಮಾಣಕ್ಕೆ ನಿರ್ಧರಿಸಿದೆ.
ಸದ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಕಾಮಗಾರಿ ಆರಂಭವಾದ 1 ವರ್ಷದ ಒಳಗಾಗಿಯೇ ಪೂರ್ಣಗೊಳಿಸುವ ಸಾಧ್ಯತೆ ಇದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.