ಲೋಕಸಭೆಗೂ ಮುನ್ನವೇ ರಾಜ್ಯ ಸರ್ಕಾರ ಪತನ :ನಳಿನ್ ಕುಮಾರ್ ಕಟೀಲ್

ಹೊಸದಿಗಂತ ವರದಿ, ಬಾಗಲಕೋಟೆ:

ಲೋಕಸಭೆಗೂ ಮುನ್ನವೇ ರಾಜ್ಯ ಸರಕಾರ ಪತನವಾಗಲಿದೆ. ಮುಖ್ಯಮಂತ್ರಿ ಬದಲಾವಣೆ ಫಿಕ್ಸ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದರು.

ಜಿಲ್ಲೆಯ ಬೀಳಗಿ ಕ್ರಾಸ್ನಲ್ಲಿ ಬರ ಅಧ್ಯಯನ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಪರೇಶನ್ ಕಮಲ ನಡೆಯಲ್ಲ, ಬದಲಾಗಿ ಆಪರೇಶನ್ ಹಸ್ತ ನಡೆಯುತ್ತಿದೆ. ಬರದ ಮಧ್ಯೆ ಕೈ ನಾಯಕರು ಖುರ್ಚಿ ಗಾಗಿ ಕಸರತ್ತು ನಡೆಸುತ್ತಿದ್ದಾರೆ. ನಾವೇನು ಸರ್ಕಾರ ಕೆಡುವುದಿಲ್ಲ. ತಾನಾಗಿಯೇ ಬೀಳಲಿದೆ. ಸಕರ್ಾರ ಬೀಳೋದನ್ನು ನಾವು ನೋಡುತ್ತಿಲ್ಲ. ರಾಜ್ಯದ ಜನತೆಯ ಪರವಾಗಿ ನಮ್ಮ ಪಕ್ಷವಿದೆ ಎಂದರು.

ಅಧಿಕಾರಕ್ಕಾಗಿ ಜಗಳ ಇರುವುದು ಕಾಂಗ್ರೆಸ್ ಪಕ್ಷದಲ್ಲಿದೆ. ಸರ್ಕಾರ ಪತನವಾದರೆ ಅದು ಕಾಂಗ್ರೆಸ್ ಪಕ್ಷದಿಂದಲೇ.ಈ ಸರ್ಕಾ ರ ಮುಂದಕ್ಕೆ ಇರೋದಿಲ್ಲ. ಸಕರ್ಾರಕ್ಕೆ ರೈತರ ಶಾಪ ತಟ್ಟುತ್ತದೆ ಎಂದರು.

ಸಂಸದ ಪಿ.ಸಿ.ಗದ್ದಿಗೌಡರ,ಶಾಸಕ ಜಗದೀಶ ಗುಡಗುಂಟಿ,ಸಿದ್ದು ಸವದಿ, ಮಾಜಿ ಸಚಿವ ಮುರಗೇಶ ನಿರಾಣಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಹಣಮಂತ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!